

ಮೈಸೂರು: ಮಾದಕ ವಸ್ತು ಹೊಂದಿದ್ದ 3 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1,20,000 ರೂ. ಮೌಲ್ಯದ 24 ಗ್ರಾಂ ತೂಕದ ಮಾದಕ ವಸ್ತು ಎಂಡಿಎಂಎ, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟಾಪ್ ಹಾಗೂ 5 ಮೊಬೈಲ್ ಫೋನ್ ವಶ ಪಡೆಸಿಕೊಂಡಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮೈಸೂರು ನಗರದ ಸಿಸಿಬಿ ಘಟಕದ ಎಚ್‌ಬಿ ವಿಭಾಗ ಮತ್ತು ಸೆನ್ ಕ್ರೈಂ ಪೊಲೀಸರು ಶನಿವಾರ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಬೋಗಾದಿ, ಎಸ್.ಬಿ.ಎಂ ಬಡಾವಣೆ, ಎ ಬ್ಲಾಕ್ ಹರಿ ವಿದ್ಯಾಲಯ ಶಾಲೆ ಬಳಿ ಇರುವ ಮನೆಯೊಂದರ ಮೇಲೆ ದಾಳಿ ಮಾಡಿ, 3 ಜನ ಆರೋಪಿಗಳನ್ನು ವಶಕ್ಕೆ ಪಡಿದ್ದಾರೆ.
ಆರೋಪಿಗಳು ವಿದ್ಯಾರ್ಥಿಗಳಾಗಿದ್ದು, ಬೆಂಗಳೂರಿನಲ್ಲಿ ವಾಸವಿರುವ ಕೇರಳ ಮೂಲದ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕವಸ್ತು ಎಂಡಿಎಂಎಅನ್ನು ಖರೀದಿಸಿ ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆಂದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.