

ಗೋಣಿಕೊಪ್ಪ : ಅತ್ತೂರು ಸಮೀಪ ಗೋಮಾಂಸ ಸಾಗಣೆ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಲಾಗಿದೆ. ರಹೀಂ ಅಲಿ, ಸಹಿದ್ದುಲ್ಲಾ, ಮನ್ನಾಸ್ ಬಂಧಿತರು. ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ವಿಶ್ವ ಹಿಂದು ಪರಿಷತ್ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಪಂದ್ಯಂಡ ಹರೀಶ್ ಸೇರಿದಂತೆ ಇತರ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಿಲ್ಲೆಯಲ್ಲಿ ಅಸ್ಸಾಂ ಕಾರ್ಮಿಕರಿಂದ ಪದೇ ಪದೆ ಇಂತಹ ದುಷ್ಕೃತ್ಯಗಳು ನಡೆಯುತ್ತಿದೆ. ಎಲ್ಲ ತೋಟದ ಮಾಲೀಕರು ತಮ್ಮಲ್ಲಿ ಕೆಲಸಕ್ಕೆ ಬರುವ ಕಾರ್ಮಿಕರ ಎಲ್ಲ ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ ಪೊಲೀಸ್ ಠಾಣೆಗೆ ನೀಡುವಂತೆ ಮನವಿ ಮಾಡಿದರು.