ಇಬ್ಬರು ಕಳ್ಳಿಯರ ಬಂಧನ

LXR WOMEN THEFT
Published on

ಲಕ್ಷೆ್ಮೕಶ್ವರ: ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಕಳ್ಳಿಯರನ್ನು ಲಕ್ಷೆ್ಮೕಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಶಾಂತಿ ವಡ್ಡರ ಹಾಗೂ ಸುಶೀಲಮ್ಮ ವಡ್ಡರ ಬಂಧಿತರು.

ಇವರಿಂದ 2,60,000 ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ ಪತ್ತೆ ಹಚ್ಚಿದ್ದಾರೆ. ಎಸ್ಪಿ ಬಿ.ಎಸ್. ನೇಮಗೌಡ್ರ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್​ಐ ನಾಗರಾಜ ಗಡಾದ, ಕ್ರೈಂ ಪಿಎಸ್​ಐ ಟಿ.ಕೆ. ರಾಠೋಡ, ಎಎಸ್​ಐ ಎನ್.ಎ. ಮೌಲ್ವಿ, ಗುರು ಬೂದಿಹಾಳ, ಎಂ.ಎಂ. ಶೀಗಿಹಳ್ಳಿ, ಆರ್.ಎಸ್. ಯರಗಟ್ಟಿ, ಎಂ.ಎ. ಶೇಖ್, ಎಂ.ಎಸ್. ಬಳ್ಳಾರಿ, ಎ.ಆರ್. ಕಮ್ಮಾರ, ಎಚ್.ಐ. ಕಲ್ಲಣ್ಣವರ, ಪಾಂಡುರಂಗರಾವ್ ಕಾರ್ಯಾಚರಣೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net