

ಹುಬ್ಬಳ್ಳಿ: ನಗರದ ಶಿವಳ್ಳಿ ರಸ್ತೆಯ ರೈಲ್ವೆ ಹಳಿ ಪಕ್ಕದ ಹೊಲದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಅಶೋಕ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಪ್ರಮುಖ ಆರೋಪಿಗಳಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಹುಬ್ಬಳ್ಳಿ ಮೂಲದ ಮಂಜುನಾಥ(25), ಕಿರಣ್(22) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಎರಡು ಬೈಕ್, ಎರಡು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಹಣದ ವ್ಯವಹಾರದ ಹಿನ್ನೆಲೆಯಲ್ಲಿ ಶಿಗ್ಗಾವಿ ತಾಲೂಕಿನ ಹನುಮನಹಳ್ಳಿ ಗ್ರಾಮದ ಫಕೀರೇಶ ಸವಣೂರು(28) ಎಂಬ ಯುವಕನ ಕೊಲೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದರು.