ಲೋಕಾಯುಕ್ತ ಹೆಸರೇಳಿಕೊಂಡಿದ್ದ ಇಬ್ಬರ ಬಂಧನ

crime
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಇಂಜಿನಿಯರ್ ವಿಲಾಸ ಅವರಿಗೆ ಲೋಕಾಯುಕ್ತ ಪೊಲೀಸರ ಹೆಸರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ ನಾಲ್ವರಲ್ಲಿ ಇಬ್ಬರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸತ್ತೂರು ನಿವಾಸಿಗಳಾದ ಶರಣು ಪಾಟೀಲ ಮತ್ತು ಜಾಕೀರ್ ಮುಲ್ಲಾ ಬಂಧಿತರು. ಶರಣು ಪಾಟೀಲ ಮತ್ತು ಮಹಾಂತೇಶ ಹಿರೇಮಠ ಎಂಬಿಬ್ಬರು ತಲೆಮರೆಸಿಕೊಂಡಿದ್ದಾರೆ. ಇಂಜಿನಿಯರ್‌ಗೆ ಕರೆ ಮಾಡಿದ ಆರೋಪಿಗಳು, ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಸತ್ತೂರಿನಲ್ಲಿರುವ ಕಚೇರಿಗೆ ಬಂದು ಇತ್ಯರ್ಥ ಮಾಡಿಕೊಳ್ಳುವಂತೆ ಹೇಳಿದ್ದರು. ಅಲ್ಲಿಗೆ ವಿಲಾಸ ತೆರಳಿದಾಗ 4 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅನುಮಾನಗೊಂಡ ಇಂಜಿನಿಯರ್ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಭೇದಿಸಿದ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಎಸ್. ಹೂಗಾರ ನೇತೃತ್ವದ ತಂಡ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net