ಇಬ್ಬರು ಕಳ್ಳರ ಬಂಧನ

Arrest
Published on

ಮೈಸೂರು: ಇಬ್ಬರು ಕಳ್ಳರನ್ನು ಆಲನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಿ.ನರಸೀಪುರ ರಸ್ತೆಯಲ್ಲಿ ಆಟೋ ಗ್ಯಾರೇಜ್‌ನಲ್ಲಿ ಕಳ್ಳತನ ನಡೆದಿತ್ತು. ಕಳ್ಳರ ಪತ್ತೆಗಾಗಿ ನಗರ ಪೊಲೀಸ್ ಆಯುಕ್ತರು ವಿಶೇಷ ತಂಡವನ್ನು ರಚಿಸಿದ್ದರು. ಗುರುವಾರ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ದಸ್ತಗಿರಿ ಮಾಡಿದ್ದಾರೆ.

ಇವರಿಂದ 24 ಲಕ್ಷ ರೂ. ವೌಲ್ಯದ ಲಾರಿ ಸೇರಿದಂತೆ ವಾಹನಗಳ ಬಿಡಿ ಭಾಗಗಳನ್ನು ಜಪ್ತಿ ಮಾಡಿದ್ದಾರೆ.

ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net