ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಿ

ಜಂಬುನಾಥ ಯಾದವ
ಜಂಬುನಾಥ ಯಾದವ
Published on

ರಾಯಚೂರು: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಆಸ್ತಿ ಕಬಳಿಸುವ ಕುರಿತು 6 ಪ್ರಕರಣಗಳು ದಾಖಲಾದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಜಾಗೋ ರಾಯಚೂರು ಸಂಘದ ಜಿಲ್ಲಾ ಕಾರ್ಯದರ್ಶಿ ವಕೀಲ ಜಂಬುನಾಥ ಯಾದವ ಆರೋಪಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಪಶ್ಚಿಮ ಠಾಣೆಯಲ್ಲಿ 4ಪ್ರಕರಣಗಳು ದಾಖಲಾಗಿವೆ. ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ತಿರಸ್ಕೃತವಾದರೂ ಆರೋಪಿಗಳು ರಾಜಾರೋಷವಾಗಿ ಸಂಚರಿಸಿದರೂ ಪೊಲೀಸರು ಬಂಧಿಸುತ್ತಿಲ್ಲ. ಸಾಮಾನ್ಯ ಪ್ರಕರಣಗಳಲ್ಲಿ ದೂರು ದಾಖಲಿಸಿ ಆರೋಪಿಗಳನ್ನು ಬಂಧಿಸುವ ಪೊಲೀಸರು ಕ್ರಿಮಿನಲ್ ಅಪರಾಧಿಗಳನ್ನು ರಕ್ಷಿಸುತ್ತಿರುವುದು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ ಎನ್ನುವ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದೆ. ಆದ್ದರಿಂದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರಮುಖರಾದ ನಸೀರ ಅಹ್ಮದ್, ಆಂಜನೇಯ, ಕಿರಣಕುಮಾರ ಸೋಲಂಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net