

ರಾಯಚೂರು: ಕಲಬುರಗಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಒತ್ತಾಯಿಸಿದೆ.
ಮಹಾಸಭಾ ಜಿಲ್ಲಾ ಘಟಕದ ನಿಯೋಗ ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಬುಧವಾರ ಮನವಿ ಸಲ್ಲಿಸಿ, ಕಿಡಿಗೇಡಿಗಳು ಉದ್ದೇಶಪೂರ್ವಕಾಗಿ ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಲಬುರಗಿಯ ಕೊಟ್ನೂರು ಬಡಾವಣೆಯಲ್ಲಿ ಕೆಲವು ಕಿಡಿಗೇಡಿಗಳು ಗುಂಪುಗೂಡಿಕೊಂಡು ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಿಯೋಗದಲ್ಲಿ ಮಹಾಸಭಾ ಜಿಲ್ಲಾಧ್ಯಕ್ಷ ಶಿವರಾಜ ಜಾನೇಕಲ್, ಪದಾಕಾರಿಗಳಾದ ಕೆ.ಇ.ಕುಮಾರ, ಗುರುದೇವ, ವೆಂಕಟೇಶ ಕಲ್ಲೂರಕರ್, ತಮ್ಮಣ್ಣ, ಎಂ.ಮಾರೆಪ್ಪ, ಮಧುಕಾಂತ, ಶ್ರೀನಿವಾಸ, ಕುರುಬ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಕೆ.ಬಸವಂತಪ್ಪ ಉಪಸ್ಥಿತರಿದ್ದರು.