ಗಾಂಜಾ ಸೇವಿಸಿದಾತನ ಬಂಧನ

arrest
Published on

ಪಡುಬಿದ್ರಿ: ಪೊಲಿಪು ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡಿದ್ದ ಹಸನಬ್ಬ(48) ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಮೇ 27ರಂದು ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮಾದಕ ಸೇವನೆ ನಶೆಯಲ್ಲಿದ್ದ ಹಸನಬ್ಬನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net