ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವ ಅರೆಸ್ಟ್

Arrest
Published on

ಮುಂಡಗೋಡ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಮಳಗಿ ಗ್ರಾಮದ ಕಿರಣ ಹಿರೆಕಣಗಿ (21) ಬಂಧಿತ. ಅಪ್ರಾಪ್ತ ವಿದ್ಯಾರ್ಥಿನಿ ಸೆ. 13ರಂದು ಮನೆಯಿಂದ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದ ಕುರಿತು ಅಪ್ರಾಪ್ತೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಾಗ ಆರೋಪಿಯು ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಿರುವುದು ಪತ್ತೆ ಯಾಗಿತ್ತು. ಯುವಕನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net