ಆರ್ಟ್ ಕ್ಯಾಂಪ್ ಆರಾಧನಾ-2024 ಬೆರಳುಗಳಲ್ಲಿ ಭಾವಗೀತೆ ಕಾರ್ಯಕ್ರಮ

karanta
ಆರಾಧನಾ ಭಾವಗೀತೆ ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್ ಉದ್ಘಾಟಿಸಿದರು
Published on

ಕೋಟ: ವಿದ್ಯಾರ್ಥಿಗಳು ರಜಾ ದಿನಗಳಲ್ಲಿ ಮೋಜು ಮಸ್ತಿಗೆ ಸಮಯ ಮೀಸಲಿಡದೆ, ಬೇಸಿಗೆ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಹಲವಾರು ವಿಷಯಗಳ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ. ಮಕ್ಕಳಲ್ಲೂ ಕನಸು ಕಾಣುವ ತುಡಿತವಿರುತ್ತದೆ, ಆ ಕನಸಿಗೆ ಬಣ್ಣ ತುಂಬುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್ ಹೇಳಿದರು.

ಕೋಟ ಡಾ.ಶಿವರಾಮ ಕಾರಂತ ಥೀಮ್‌ಪಾರ್ಕ್‌ನಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಪಂ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮೂರು ದಿನಗಳ ಆರ್ಟ್ ಕ್ಯಾಂಪ್ ಆರಾಧನಾ-2024 ಬೆರಳುಗಳಲ್ಲಿ ಭಾವಗೀತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋಟತಟ್ಟು ಗ್ರಾಪಂ ಪಿಡಿಒ ರವೀಂದ್ರ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರಂತ ಥೀಮ್ ಪಾರ್ಕ್‌ನಲ್ಲಿ ಮಕ್ಕಳಿಗಾಗಿ ಹಲವಾರು ಚಟುವಟಿಕೆ, ತರಬೇತಿ ನಡೆಯುತ್ತಿರುತ್ತದೆ ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕೋಟತಟ್ಟು ಗ್ರಾಪಂ ಕಾರ್ಯದರ್ಶಿ ಸುಮತಿ ಅಂಚನ್, ಚಿತ್ರಕಲಾ ಶಿಕ್ಷಕಿ ಕುಮಾರಿ ಐಶ್ವರ್ಯಾ ಉಪಸ್ಥಿತರಿದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿ, ನಕ್ಷತ್ರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net