

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಏರ್ಯ ಆಳ್ವ ಫೌಂಡೇಷನ್ ಮೊಡಂಕಾಪು ಸಹಯೋಗದೊಂದಿಗೆ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸ್ಮರಣಾರ್ಥ ಆಯೋಜಿಸಲಾದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಸೇವಾಂಜಲಿ ಸಭಾಭವನದಲ್ಲಿ ಭಾನುವಾರ ಸಂಜೆ ನಡೆಯಿತು.
ಸ್ಪರ್ಧೆಯ ತೀರ್ಪುಗಾರರಾದ ಚಿತ್ರಕಲಾ ಶಿಕ್ಷಕ ಸಯ್ಯದ್ ಆಸೀಫ್ ಆಲಿ ಹಾಗೂ ಚೆನ್ನ ಕೇಶವ ಡಿ.ಆರ್, ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹಗ್ರಂಥಪಾಲಕ ಸಂತೋಷ್ ಕುಲಾಲ್ ನೆತ್ತರಕೆರೆ, ಸಾಮಾಜಿಕ ಕಾರ್ಯಕರ್ತೆ ಉಮಾ ಚಂದ್ರಶೇಖರ್, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಉಪಸ್ಥಿತರಿದ್ದರು.
ತೀರ್ಪುಗಾರರು ತಮ್ಮ ಅನಿಸಿಕೆ ತಿಳಿಸಿದರು. ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಮಂಚಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಅರ್ಜುನ್ ಪೂಂಜ, ಪ್ರಶಾಂತ್ ತುಂಬೆ, ದಿನೇಶ್ ತುಂಬೆ ಸಹಕರಿಸಿದರು.