ಸ್ವಾತಂತ್ರೃದ ಅಮೃತ ಮಹೋತ್ಸವ ಪ್ರಯುಕ್ತ ಚಿತ್ರಕಲಾ ಪ್ರದರ್ಶನ

art exhibition
Published on

ಮೈಸೂರು: ಸ್ವಾತಂತ್ರೃದ ಅಮೃತ ಮಹೋತ್ಸವ ಪ್ರಯುಕ್ತ ಕಲಾವಿದ ಯು.ಜಿ. ಮೋಹನ್ ಕುಮಾರ್ ಆರಾಧ್ಯ ರಚನೆಯ 75 ಸ್ವಾತಂತ್ರೃ ಹೋರಾಟಗಾರರ ಚಿತ್ರಕಲಾ ಪ್ರದರ್ಶನ ಮತ್ತು ಸ್ವಾತಂತ್ರೃ ಹೋರಾಟಗಾರರಿಗೆ ಸನ್ಮಾನ ಸಮಾರಂಭ ಭಾನುವಾರ ಕಲಾಮಂದಿರ ಆವರಣದ ಸುಚಿತ ಆರ್ಟ್ ಗ್ಯಾಲರಿಯಲ್ಲಿ ನಡೆಯಿತು.

ಕನ್ನಡ ಸಾಹಿತ್ಯ ಕಲಾಕೂಟ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಾತಂತ್ರೃ ಹೋರಾಟಗಾರರಾದ ಪ್ರೇಮಾವತಿ, ವೇದಾಂಬ, ಗಿರಿಜಾ, ವೈ.ಸಿ. ರೇವಣ್ಣ, ರಂಗಶೆಟ್ಟಿ, ಪುಟ್ಟಣ್ಣ ಹಾಗೂ ಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ ಮಾತನಾಡಿ, ಸ್ವಾತಂತ್ರೃ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಾವು ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ. ಸ್ವಾತಂತ್ರೃ ಹೋರಾಟಗಾರರನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಳವರಹುಂಡಿ ಸಿದ್ದಪ್ಪ, ಉದ್ಯಮಿ ಎ.ಪಿ. ನಾಗೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮಾಜಿ ಅಧ್ಯಕ್ಷರಾದ ಮಾನಸ, ಎಂ. ಚಂದ್ರಶೇಖರ್, ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು, ಸ್ವಾತಂತ್ರೃ ಹೋರಾಟಗಾರರ ಸಂಘದ ಕಾರ್ಯದರ್ಶಿ ಯೋಗಾನಂದ, ಕಲಾವಿದ ಯು.ಜಿ. ಮೋನ್ ಕುಮಾರ್ ಆರಾಧ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net