ಕಲೆಗೆ ಎಂದೆಂದಿಗೂ ಬೆಲೆ ಇರಲಿದೆ

29Kush06
ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಂದ ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಶರವಣ ಕುಮಾರ್ ಚಾಲನೆ ನೀಡಿದರು. ಡಿವೈಎಸ್ಪಿ ಗಂಗಾಧರಪ್ಪ ಇತರರು ಇದ್ದರು.
Published on

ಕುಶಾಲನಗರ: ಛಾಯಾಗ್ರಾಹಕ ವೃತ್ತಿಯನ್ನು ಮೊಬೈಲ್ ಕಸಿದುಕೊಂಡಿದ್ದರೂ, ತಂತ್ರಜ್ಞಾನ ಎಷ್ಟೇ ಬೆಳೆದರೂ ಛಾಯಾ ಕಲೆಗೆ ಈಗಲೂ ಬೆಲೆ ಇದೆ. ಮುಂದೆಯೂ ಇದ್ದೆ ಇರುತ್ತೆ ಎಂದು ಪ್ಯಾಕ್ಸ್ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶ್ರವಣಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಂದ ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ಸಹಕಾರ ಸಂಘವು ಕುಶಾಲನಗರ ಮತ್ತು ಮಡಿಕೇರಿ ವ್ಯಾಪ್ತಿಯ ಛಾಯಾಗ್ರಾಹಕರ ಸಂಘದ ಸದಸ್ಯತ್ವದ ಗುರುತಿನ ಚೀಟಿ ಇರುವವರಿಗೆ ನಮ್ಮ ಸಂಸ್ಥೆಯಲ್ಲಿ ಸದಸ್ಯತ್ವ ಕೊಡಲು ನಮ್ಮ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ವಿಶೇಷವಾದ ಸಾಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಕುಶಾಲನಗರ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಮಾತನಾಡಿ, ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸದೃಢತೆ ದೊರೆಯುತ್ತದೆ. ಆಟದಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದರು.
ಜಿಲ್ಲೆಯ ನಾನಾ ಭಾಗಗಳಿಂದ 6 ಛಾಯಾಗ್ರಾಹಕರ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಜಿಲ್ಲಾಧ್ಯಕ್ಷ ಆವರ್ತಿ.ಆರ್.ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಲವಕುಮಾರ್, ಸಂಘಟನಾ ಕಾರ್ಯದರ್ಶಿ ಸುಬ್ರಮಣಿ, ಉಪಾಧ್ಯಕ್ಷ ರೋಷನ್, ಕ್ರೀಡಾ ಕಾರ್ಯದರ್ಶಿ ಡ್ಯಾಡು ಜೋಸೆಫ್, ಮಾಜಿ ಜಿಲ್ಲಾಧ್ಯಕ್ಷ ವಸಂತ, ಕೆ.ಎಸ್.ನಾಗೇಶ್, ವಿಶ್ವ ಗುಡ್ಡೆಮನೆ, ವಿಜಯಕುಮಾರ್, ಪ್ರದೀಪ್ ಮರಗೊಡು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net