

ಕಾಸರಗೋಡು: ತಂತ್ರಜ್ಞಾನ ಮುಂದುವರಿಯುತ್ತಿರುವ ಯುಗದಲ್ಲಿ, ಇದರ ಬಗೆಗಿನ ಟೀಕೆಗಳನ್ನು ಬದಿಗಿರಿಸಿ, ಕೃತಕ ಬುದ್ಧಿಮತ್ತೆಯ ಸಾಮರ್ಥ್ಯ ಬಳಸಿಕೊಳ್ಳುವುದು ಇಂದಿನ ಅನಿವಾರ್ಯತೆಗಳಲ್ಲಿ ಒಂದು. ಕೃತಕ ಬುದ್ಧಿಮತ್ತೆ ಸಹಾಯದಿಂದ ಉತ್ತಮ ಸಾಹಿತ್ಯ ಕೃತಿಗಳನ್ನು ರಚಿಸಬಹುದು. ಜತೆಗೆ ಇದರ ದುರ್ಬಳಕೆ ತಡೆಯಬೇಕಾದ ಅಗತ್ಯವಿದೆ ಎಂದು ಕೇರಳ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎಸ್.ಅಚ್ಯುತ ಶಂಕರ ಹೇಳಿದರು.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‌ನ ಭಾಷಾಶಾಸ್ತ್ರ ವಿಭಾಗ ಆಯೋಜಿಸಿದ್ದ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರ ಸರಣಿಯಲ್ಲಿ ಭಾರತೀಯ ಭಾಷೆಗಳಲ್ಲಿ ‘ಕೃತಕ ಬುದ್ಧಿಮತ್ತೆ’ ವಿಷಯ ಕುರಿತು ಉಪನ್ಯಾಸ ನೀಡಿದರು.
ಭಾಷಾಶಾಸ್ತ್ರ, ತೌಲನಿಕ ಸಾಹಿತ್ಯದ ಡೀನ್ ಪ್ರೊ.ಜೋಸ್ೆ ಕೊಯಿಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಡಾ.ಎಸ್.ತೆನ್ನರಸು, ಡಾ.ಪಿ.ಶ್ರೀಕುಮಾರ್ ಉಪಸ್ಥಿತರಿದ್ದರು.