

ಮಂಗಳೂರು: ಯೆನೆಪೋಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ದೇಣಿಗೆಯಾಗಿ ನೀಡಿದ ಕೃತಕ ಕಾಲುಗಳನ್ನು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಫಲಾನುಭವಿ ಪಡೀಲ್ನ ಪ್ರಕಾಶ್ ಸಪಲ್ಯರಿಗೆ ಹಸ್ತಾಂತರಿಸಿದರು.
ವಿದ್ಯಾರ್ಥಿಗಳ ಈ ಸಮಾಜಮುಖಿ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ಹೇಳಿದರು.
ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಶ್ಯಾನ್‌ಭಾಗ್, ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ, ಯೆನೆಪೋಯ ಕಾಲೇಜಿನ ಪ್ರಾಂಶುಪಾಲ ಅರುಣ್ ಭಾಗವತ್, ಯುವ ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ, ಕಾರ್ಯಕ್ರಮ ಸಂಯೋಜನಾಧಿಕಾರಿ ಜ್ಯೋತಿ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ವೆನ್ಲಾಕ್ ಆಸ್ಪತ್ರೆಯ ಡಾ.ಕೆ.ಆರ್.ಕಾಮತ್, ಡಾ.ಆಶಿತ್ ಠಾಕೂರ್,ರೆಡ್‌ಕ್ರಾಸ್‌ನ ಹಿರಿಯ ಸದಸ್ಯರಾದ ಪ್ರಭಾಕರ ಶರ್ಮ, ರವೀಂದ್ರನಾಥ ಉಚ್ಚಿಲ್ ಉಪಸ್ಥಿತರಿದ್ದರು.