ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶ್ರಾಂತ ಪ್ರಾಧ್ಯಾಪಕ,ಹಿರಿಯ ಯಕ್ಷಗಾನ ಅರ್ಥಧಾರಿ ಜಿ.ಕೆ ಭಟ್ ಸೇರಾಜೆ, ಶಾಸಕ ವೇದವ್ಯಾಸ ಕಾಮತ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿ ರಾಜಶೇಖರ ಕೋಟ್ಯಾನ್, ಪುಳಿಂಚ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ್ ಶೆಟ್ಟಿ ಪುಳಿಂಚ ಅವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಇಡೀ ರಾತ್ರಿ ತೆಂಕುತಿಟ್ಟಿನ ಪ್ರಸಿದ್ದ ಕಲಾವಿದರ ಒಗ್ಗೂಡುವಿಕೆಯಲ್ಲಿ ಅಂಭಾಶಪಥ, ಲಕ್ಷ್ಮೀ ಸ್ವಯಂವರ, ತಾಮ್ರದ್ವಜ ಕಾಳಗ ಯಕ್ಷಗಾನ ಉಚಿತವಾಗಿ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.