ಕಲಾವಿದ ಕುಂದರಗಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ

18 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಇಟಿಗಟ್ಟಿ ಗ್ರಾಮದ ಜಾನಪದ ಕಲಾವಿದ ಪ್ರಭು ಬಸಪ್ಪ ಕುಂದರಗಿ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯನ್ನು ಬೀದರದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 25,000 ರೂಪಾಯಿ ನಗದು ಪುರಸ್ಕಾರ, ಪ್ರಶಸ್ತಿ ಫಲಕ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.

ಪ್ರಭು ಕುಂದರಗಿ ಅವರು 40 ವರ್ಷಗಳಿಂದ ಜಾನಪದ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಸದಸ್ಯ ಸಂಚಾಲಕ ವಿಜಯಕುಮಾರ ಸೋನಾರೆ, ರಿಜಿಸ್ಟ್ರಾರ್ ಎನ್. ನಮೃತ, ಶಂಕ್ರಣ್ಣ ಸಂಕಣ್ಣವರ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net