

ಮೈಸೂರು: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಮಂಗಳವಾದ್ಯ ಕಲಾವಿದರಿಗೆ ಆಗಿದೆ ಎಂದು ಆರೋಪಿಸಿ ರಾಜ್ಯ ಸವಿತಾ ಮಂಗಳವಾದ್ಯ ಸಂಗೀತಗಾರರ ಸಂಘದಿಂದ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆಯಿತು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಹಾಗೂ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡದೆ ಅನ್ಯಾಯ ಮಾಡಲಾಗುತ್ತಿದೆ. ಯಾವುದೇ ವೇದಿಕೆಗಳಲ್ಲೂ ಅವಕಾಶ ಸಿಗುತ್ತಿಲ್ಲ. ಒಬ್ಬರಿಗೆ ಹಲವು ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಉಳಿದ ಉತ್ತಮ ಕಲಾವಿದರು ಕಡೆಗಣನೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಅರ್ಜಿ ಹಾಕಿದರೂ ಅವಕಾಶ ಸಿಗುತ್ತಿಲ್ಲ. ಪ್ರತಿ ದಸರಾದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಲಾವಿದರಾದ ಎಸ್.ಪುಟ್ಟರಾಜು, ಎಂ.ಎನ್. ಶ್ರೀನಿವಾಸು, ನಾರಾಯನ್, ಹರೀಶ್, ಕೃಷ್ಣ, ಅಜಯ್, ಶ್ರೀಧರ್ ಹಾಗೂ ಇತರರು ಇದ್ದರು.