

ಸಿದ್ದಾಪುರ : ಭಾರತೀಯ ನೃತ್ಯ ಕಲಾ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ನೃತ್ಯ ಸಂಭ್ರಮ ಕಾರ್ಯಕ್ರಮ ಸಿದ್ದಾಪುರದ ಚರ್ಚ್ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಭಾರತೀಯ ನೃತ್ಯ ಕಲಾ ಶಾಲೆಯ ಶಿಕ್ಷಕಿ ವಿದುಷಿ ಜಲಜ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ನೃತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ನೃತ್ಯಶಾಲೆಯ 46 ಕಲಾವಿದರು ಭರತ ನಾಟ್ಯ, ಜಾನಪದ, ರಾಮಾಯಾಣ ಮತ್ತು ಮಹಾಭಾರತ ರೂಪಕಗಳಂತಹ ವೈವಿಧ್ಯಮಯ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ನೆರೆದಿದ್ದವರ ಗಮನ ಸೆಳೆದರು.
ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಕೃಷ್ಣವೇಣಿ ಉದ್ಘಾಟಿಸಿ ಶುಭ ಹಾರೈಸಿದರು. ಎಸ್‌ಎನ್‌ಡಿಪಿ ಕೊಡಗು ಯೂನಿಯನ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿದರು. ಡಾನ್ಸ್ ಕರ್ನಾಟಕ ಡಾನ್ಸ್ ಸೀಸನ್-5ರ ವಿಜೇತ ರಾಹುಲ್ ರಾವ್ ಅವರನ್ನು ಸನ್ಮಾನಿಸಲಾಯಿತು.