

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಅರುಳ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಅರುಳ್‌ಕುಮಾರ್ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿಯಾಗಿ(ಆಡಳಿತ ಮತ್ತು ಸಮನ್ವಯ) ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಇದುವರೆಗೂ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರಿಗೆ ಯಾವುದೇ ಸ್ಥಳ ನಿಯೋಜಿಸಿಲ್ಲ.
ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರನ್ನಾಗಿ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಎಸ್.ಕುಸುಮಕುಮಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಇದ್ದ ಹೆಚ್ಚುವರಿ ಆಯುಕ್ತೆ ಎಂ.ಜೆ.ರೂಪಾ ಅವರಿಗೆ ಇನ್ನೂ ಸ್ಥಳ ನಿಯೋಜಿಸಿಲ್ಲ. ಕುಸುಮ ಕುಮಾರಿ ಈ ಹಿಂದೆ ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದರು.