ಅರುಣೋದಯ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ARUNODAY
Published on

ಗದಗ: ಗದುಗಿನ ಅರುಣೋದಯ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಸೆ. ೫ ರಂದು ಮಂಗಳವಾರ ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ಅನಿತಾ ನರೇಶ್ ಹೊಂಡಿಯಾ ಅವರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಔಚಿತ್ಯವನ್ನು ವಿವರಿಸಿದರು. ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಜಯರಾಜ ಮುಳಗುಂದ ಅವರು ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಪಾತ್ರ ಕುರಿತು ಮಾತನಾಡಿದರು.
ಮುಖ್ಯೋಪಾಧ್ಯಾಯ ಮಲ್ಲಪ್ಪ ಹಕ್ಕಿ, ಶಿಕ್ಷಕರಾದ ಜಗದೀಶ ಹಡಪದ, ಶ್ರೀಮತಿ ಜಯಶ್ರೀ ಭಾವರೆ, ರೇಣುಕಾ ದಾಸರ, ವೀಣಾ ಕೊಲ್ಲಾಪುರೆ ಹಾಗೂ ಸಿಬ್ಬಂದಿಯಾದ ಮಲ್ಲಿಕಾರ್ಜುನ ನಾಗಲಾಪೂರ ಅವರುಗಳಿಗೆ ಸಮಾರಂಭದಲ್ಲಿ ಉಡುಗೋರೆ ನೀಡಿ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net