ಅರವಿಂದ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ

highcourt
Published on

ಬೆಂಗಳೂರು: ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರು, ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು , ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಹೈಕೋರ್ಟ್‌ನ ನ್ಯಾಯಮೂರ್ತಿಗಳು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net