

ಮೈಸೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ ನೀಡಲಾಗುವ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ-2025ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಅವರು ಭಾಜನರಾಗಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ 50ನೇ ವಾರ್ಷಿಕ ಆರ್ಯಭಟ ಸುವರ್ಣ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಡಳಿತ ಕ್ಷೇತ್ರ(ಇಂಜಿನಿಯರಿಂಗ್)ದಲ್ಲಿನ ಸೇವೆ ಪರಿಗಣಿಸಿ ಜಿ. ಶೀಲಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ.ಅಶೋಕ ಬಿ.ಹಿಂಚಿಗೇರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಚಿತ್ರ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್. ಎಲ್.ಎನ್.ರಾವ್ ಇದ್ದರು.