

ಪುತ್ತೂರು ಗ್ರಾಮಾಂತರ: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ 205.21 ಕೋಟಿ ರೂ. ವ್ಯವಹಾರ ಮಾಡಿ 1.03 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿ ಘೋಷಿಸಿದರು.
ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಇತ್ತೀಚೆಗೆ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೇ.98.17 ಸಾಲ ಮರುಪಾವತಿಯಾಗಿದೆ. ಅಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಪಡೆಯಲಾಗಿದ್ದು, ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದರು.
ವಿಪ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ನಟ ವಿಜಯಹರಿ ರೈ ಬಳ್ಳಮಜಲು ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ನಡಾವಳಿ ಮಂಡಿಸಿದರು. ವ್ಯವಸ್ಥಾಪಕ ಅಜಿತ್ ಕುಮಾರ್ ರೈ ವರದಿ ಮಂಡಿಸಿದರು. ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರಾದ ಸತೀಶ್ ನಾಕ್ ಪರ್ಲಡ್ಕ, ಸದಾನಂದ ಶೆಟ್ಟಿ ಕೂರೇಲು, ಗಣೇಶ್ ರೈ ಬಳ್ಳಮಜಲು, ಗಣೇಶ್ ರೈ ತೊಟ್ಲಮೂಲೆ, ಶೀನಪ್ಪ ಮರಿಕೆ, ಇಸ್ಮಾಯಿಲ್ ಮಲಾರು, ಚಂದ್ರಕಲಾ ಓಟೆತ್ತಿಮಾರು, ತೇರೇಜಾ ಎಂ.ಸ್ವಿಕ್ವೇರಾ, ತಿಮ್ಮಪ್ಪ ಜಂಗಮುಗೇರು, ಸಂಶುದ್ದೀನ್ ನೀರ್ಕಜೆ, ರಂಜಿತ್ ಬಂಗೇರ ಸಂಪ್ಯ, ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್‌ನ ಮೇಲ್ವಿಚಾರಕ ಶರತ್ ಡಿ. ಉಪಸ್ಥಿತರಿದ್ದರು.
ನಿರ್ದೇಶಕಿ ಚಂದ್ರಕಲಾ ಸ್ವಾಗತಿಸಿದರು. ಉಮೇಶ್ ಎಸ್.ಕೆ. ನಿರೂಪಿಸಿದರು. ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು ವಂದಿಸಿದರು.