

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆಯಾದರು.
ಆರ್ಯಾಪು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಹಾಗೂ ಪೂರ್ಣಿಮಾ ರೈ ಕಾಂಗ್ರೆಸ್ ಸೇರಿದ ಗ್ರಾಪಂ ಸದಸ್ಯರಾಗಿದ್ದು, ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶಾಸಕರಾದ ಅಶೋಕ್ ರೈ, ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಯವರು ಪಕ್ಷದ ದ್ವಜ ನೀಡಿ ಇಬ್ನರನ್ನೂ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.
ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಸಾಮಾಜಿಕ ಜಾಲತಾಣದ ಬ್ಲಾಕ್ ಘಟಕದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.