ತಕರಾರಿಲ್ಲ; ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ..

Vinay Kulkarni 345
Published on

ಧಾರವಾಡ: ಯೋಗೀಶ್​ ಗೌಡ ಕೊಲೆ ಪ್ರಕರಣದ ಆರೋಪಿ ಆಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ. ಇಂದು ನಡೆಯಬೇಕಿದ್ದ ಜಾಮೀನು ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಈ ಮೂಲಕ ಪ್ರಕರಣ ಮುಂದೇನಾಗಲಿದೆ ಎಂಬ ಕುತೂಹಲ ಕೂಡ ಮುಂದುವರಿದಿದೆ.

ಎಲ್ಲ ಅಂದುಕೊಂಡಂತೆಯೇ ನಡೆದಿದ್ದರೆ ಇಂದು ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಇವತ್ತು ತಕರಾರು ಅರ್ಜಿ ಸಲ್ಲಿಸಬೇಕಿದ್ದ ಸಿಬಿಐ ಅದನ್ನು ಸಲ್ಲಿಸದ ಕಾರಣ ವಿಚಾರಣೆ ಮುಂದಕ್ಕೆ ಹೋಗಿದೆ.

ಕುಲಕರ್ಣಿ ಪರ ವಕೀಲರು ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು, ನ. 12ರಂದು ಮೊದಲ ವಿಚಾರಣೆ ನಡೆದಿತ್ತು. ಬಳಿಕ ನ. 18ಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಆದರೆ ಇದೀಗ ವಿಚಾರಣೆ ನಾಳೆಗೆ ಮುಂದೂಡಲ್ಪಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net