ಮಕ್ಕಳ ದಸರಾ ಅಂಗವಾಗಿ ಅ.೨೦ ರಂದು ವಿವಿಧ ಸ್ಪರ್ಧೆ

IMG-20230913-WA0447
Published on

ಮಡಿಕೇರಿ: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅ.೨೦ ರಂದು ಶುಕ್ರವಾರ ನಗರದ ಗಾಂಧಿ ಮೈದಾನದಲ್ಲಿ ೧೦ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪರ್ಧೆಗಳು ಅ.೨೦ ರಂದು ಶುಕ್ರವಾರ ಬೆಳಗ್ಗೆ ೯.೩೦ ಗಂಟೆಯಿಂದ ಪ್ರಾರಂಭವಾಗಲಿದೆ. ಎಸ್‌ಎಸ್‌ಎಲ್‌ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ ೫ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪರ್ಧಿಗಳಿಗೆ ಅವಕಾಶವಿದೆ. ೧೦ ನಿಮಿಷದ ಪ್ರದರ್ಶನಾವಧಿಯುಳ್ಳ ಮಂಟಪ ತಯಾರಿಕಾ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ ೬ ಮಕ್ಕಳು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.


ಎಲ್‌ಕೆ.ಜಿ.ಯಿಂದ ೭ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪರ್ಧೆಗಳು ನಡೆಯಲಿದ್ದು, ಗರಿಷ್ಠ ೨ ನಿಮಿಷದ ಪ್ರದರ್ಶನಕ್ಕೆ ಮಾತ್ರ ಅವಕಾಶ ಇದೆ. ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ. ೪ ರಿಂದ ೬ನೇ ತರಗತಿ ಮತ್ತು ೮ ರಿಂದ ೧೦ ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪರ್ಧೆ ಆಯೋಜಿತವಾಗಿದೆ ಎಂದು ತಿಳಿಸಿದ್ದಾರೆ.


ಅ.೨೦ ರಂದು ಶುಕ್ರವಾರ ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ಸಭಾಂಗಣದಲ್ಲಿ ಸ್ಪರ್ಧಿಗಳು ಬೆಳಗ್ಗೆ ೯ ಗಂಟೆಗೆ ಸರಿಯಾಗಿ ಹಾಜರಿರಬೇಕು. ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಮಕ್ಕಳಿಂದ ಸಂತೆ ಶಫಾಲಿ ರೈ ೯೭೪೧೫೨೩೪೮೪, ಮಕ್ಕಳಿಂದ ಅಂಗಡಿ ಸ್ಪರ್ಧೆ ಪ್ರಿಯಾ ಪ್ರಶಾಂತ್ ೯೪೪೯೯೧೫೫೨೨, ಮಕ್ಕಳಿಂದ ಮಂಟಪ ಗಾನಾ ಪ್ರಶಾಂತ್ ೯೪೪೯೭೧೩೭೪೮, ಛದ್ಮವೇಶ ಸ್ಪರ್ಧೆ ಶಮ್ಮಿ ಪ್ರಭು ೯೪೪ ೯೮೩೩೧೭೯, ನಮಿತಾ ೯೪೪೮೯೭೬೪೦೫ ಕ್ಲೇ ಮಾಡೆಲಿಂಗ್ ಸಂಪರ್ಕಿಸಬಹುದು. ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಅ.೧೦ ಕೊನೆ ದಿನವಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net