

ಸಿಂಧನೂರು: ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಹಿರೇಮಠ ಶನಿವಾರ ಆಯ್ಕೆಯಾದರು. 34 ಸ್ಥಾನ ಬಲದ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ತಾಪಂಸಭಾಂಗಣದಲ್ಲಿ ಚುನಾವಣೆ ನಡೆಯಿತು.
ಚಂದ್ರಶೇಖರ ಹಿರೇಮಠ 22 ಮತ , ವೀರೇಶ ಸಾಸಲಮರಿ 12 ಮತ ಪಡೆದರು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿನ ಕೆಲ ಗೊಂದಲಗಳಿಂದ ಚುನಾವಣಾಧಿಕಾರಿಗಳ ನಡೆ ಚರ್ಚೆಗೆ ಕಾರಣವಾಗಿತ್ತು.
ಆದರೆ ಇಂದು ಸುಸೂತ್ರವಾಗಿ ಚುನಾವಣೆ ನಡೆದು, ಮತಗಳ ಎಣಿಕೆಯೂ ನಡೆಯಿತು. ಚುನಾವಣಾಧಿಕಾರಿಗಳಾಗಿ ನಿವೃತ್ತ ಮುಖ್ಯಶಿಕ್ಷಕ ಬಿ.ರವಿಯಪ್ಪ, ಸಹಾಯಕ ಚುನಾವಣಾಧಿಕಾರಿಯಾಗಿ ಅಮರಯ್ಯಸ್ವಾಮಿ ಕಾರ್ಯನಿರ್ವಹಿಸಿದರು.