ಒಲಿಂಪಿಕ್ಸ್ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಶಶಿಕಲಾ ಜೊಲ್ಲೆ ಆಯ್ಕೆ

03
Published on


ನಿಪ್ಪಾಣಿ: ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಭಾರತೀಯ ವಿಶೇಷ ಒಲಿಂಪಿಕ್ಸ್ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಗುರುವಾರ ಆಯ್ಕೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ಜರುಗಿದ ಅಂಗವಿಕಲ ಮಕ್ಕಳ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಭಾರತೀಯ ವಿಶೇಷ ಒಲಿಂಪಿಕ್ಸ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಾಸಕಿ ಶಶಿಕಲಾ ಜೊಲ್ಲೆ, ಉಪಾಧ್ಯಕ್ಷರಾಗಿ ರೂಪಸಿಂಗ್ ಜನರಲ್, ಕಾರ್ಯದರ್ಶಿಯಾಗಿ ಅಮರೇಂದ್ರ ಎ., ಕ್ರೀಡಾ ನಿರ್ದೇಶಕರಾಗಿ ನಾರಾಯಣ ಐ.ಡಿ, ಶಕುಂತಲಾ ಭಟ್, ಹಾಲಪ್ಪ ಹಿರೇಮಠ ಆಯ್ಕೆಯಾಗಿದ್ದಾರೆ.

ಶಾಸಕಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾ ನಡ್ಡಾ ನೇತತ್ವದಲ್ಲಿ ದೇಶದಲ್ಲಿ ಅಂಗವಿಕಲ ಮಕ್ಕಳಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅವರ ನಾಯಕತ್ವದಲ್ಲಿ ಅಂಗವಿಕಲ ಮಕ್ಕಳನ್ನು ವಿಶೇಷ ಒಲಿಂಪಿಕ್ಸ್‌ಗೆ ಸಿದ್ಧಗೊಳಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net