ಬೆಳಗಾವಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗಮನ

IMG-20251002-WA0036.jpg
Published on

ಬೆಳಗಾವಿ: ಧಾರಾಕಾರ ಮಳೆ, ನದಿಗಳ ಪ್ರವಾಹದಿಂದ ಜಿಲ್ಲೆಯಲ್ಲಿ ಹಾನಿಯಾಗಿರುವ ಪ್ರದೇಶಗಳಿಗೆ ಶುಕ್ರವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಕಿತ್ತೂರು ಮತಕ್ಷೇತ್ರದ ನೇಸರಗಿ, ನಾಗನೂರು ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ತಾರಿಹಾಳ, ಹಿರೆಬಾಗೇವಾಡಿ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ತಂಡದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ, ಎನ್ ರವಿಕುಮಾರ್, ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ್ ಬೆಲ್ಲದ, ಸಂಸದರಾದ ರಮೇಶ್ ಜಿಗಜಿಣಗಿ,ಪಿ.ಸಿ ಗದ್ದಿಗೌಡರ, ಈರಣ್ಣ ಕಡಾಡಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ,ಅಭಯ ಪಾಟೀಲ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಸಿದ್ದು ಸವದಿ ಹಾಗೂ ಮಾಜಿ ಶಾಸಕರು, ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net