ಕರೊನಾ ಬರುತ್ತೆ‌ ಕೆಲಸಕ್ಕೆ ಹೋಗ್ಬೇಡ ಎಂದಿದ್ದಕ್ಕೆ ಆತ್ಮಹತ್ಯಗೆ ಶರಣಾದ ಆಶಾ ಕಾರ್ಯಕರ್ತೆ

Asha Karyakarte
Published on

ಬೆಂಗಳೂರು: ಕರೊನಾ ಬರುತ್ತೆ‌ ಕೆಲಸಕ್ಕೆ ಹೋಗಬೇಡ ಎಂದು ಬೈದಿದಕ್ಕೆ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕವಿತಾ (27) ಮೃತ ದುರ್ದೈವಿ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡ ಮೂಲದ ಕವಿತಾ ಬೆಂಗಳೂರು ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತಿದ್ದರು.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿದ್ದ ಕವಿತಾ, ಯಲಹಂಕದ‌ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕೆಲಸಕ್ಕೆ ಹೋಗಬೇಡ ಅಂದಿದ್ದರು. ಕಳೆದ ಹತ್ತು ದಿನಗಳಿಂದ ಕವಿತಾ ಕೆಲಸಕ್ಕೆ ಹೋಗಿರಲಿಲ್ಲ.

ಅಣ್ಣನ ಬೈಗುಳಕ್ಕೆ ಬೇಸತ್ತು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net