ಹೆರಿಗೆ ವೇಳೆ ರಕ್ತಸ್ರಾವದಿಂದ ಆಶಾ ಕಾರ್ಯಕರ್ತೆ ಸಾವು

Bhavya
Published on

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯಾ(28) ಹೆರಿಗೆ ಸಂದರ್ಭ ತೀರಾ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಭವ್ಯಾ ಅವರದ್ದು ಮೂರನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರಕ್ತಸ್ರಾವ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಭವ್ಯಾ ಅವರು ಪತಿ ಬಾಲಕೃಷ್ಣ ಗೌಡ, ಪುತ್ರರಾದ 4ನೇ ತರಗತಿ ವಿದ್ಯಾರ್ಥಿ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸುವನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net