

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರನ್ನು ತೊಡಗಿಸಿಕೊಳ್ಳಲು ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಸೆ.22 ರಿಂದ ಅ.7ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಕಾರ್ಯಕರ್ತೆಯರು ಭಾಗವಹಿಸಲು ನಿರ್ದೇಶನ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಶೇ.90 ಮನೆಗಳಿಗೆ ಭೇಟಿ ನೀಡಿ. ಜಾಗೃತಿ ಅಭಿಯಾದ ಆ್ಯಪ್ ಮೂಲಕ ಯುಹೆಚ್‌ಐಡಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳ ಸಂಗ್ರಹಿಸುವ ಪ್ರತಿ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ಗೌರವಧನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಲೆಕ್ಕಶೀರ್ಷಿಕೆಯಡಿ ಒದಗಿಸುವ ಅನುದಾನದಲ್ಲಿ ಆರೋಗ್ಯ ಇಲಾಖೆ ಮೂಲಕ ಪಾವತಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.