ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ; ಬೇಡಿಕೆ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪಟ್ಟು

WhatsApp Image 2020-07-29 at 9.36.36 PM
Published on

ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಎಸ್‌ಯುಸಿಐ(ಸಿ) ನಗರ ಕಾರ್ಯದರ್ಶಿ ಎಸ್.ಎನ್.ಸ್ವಾಮಿ ಮಾತನಾಡಿ, ರಾಜ್ಯಾದ್ಯಂತ ಜು.10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಪರಿಹಾರ ನೀಡಿಲ್ಲ ಎಂದರು.ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿರುವುದು ಜಡ್ಡುಗಟ್ಟಿರುವ ವ್ಯವಸ್ಥೆ ವಿರುದ್ಧ, ಆಶಾಗಳು ಗೌರವ ದಿಂದ ಜೀವನ ನಡೆಸಬೇಕು. ನಾಡಿನ ಹಿತ ಕಾಯುವ ಆಶಾಗಳ ಆರೋಗ್ಯದ ಕಾಳಜಿ ವಹಿಸುವುದು ಸರ್ಕಾರದ ಕೆಲಸ ಎಂದು ಹೇಳಿದರು. ಹೋರಾಟಕ್ಕೆ ಮಣಿದಿರುವ ಸರ್ಕಾರ ಸಂಘದ ನಾಯಕರೊಂದಿಗೆ ಮಾತುಕತೆ ನಡೆಸಿದೆ. ಆದರೆ, ಸ್ಪಷ್ಟ ನಿರ್ಧಾರ ಹೊರಬೀಳುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಮಾತನಾಡಿ, ಅಹವಾಲುಗಳನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಸರ್ಕಾರವೂ ನಿಮ್ಮ ಬೇಡಿಕೆ ಈಡೇರಿಸುತ್ತದೆಂಬ ಆಶಾ ಭಾವನೆ ಇದೆ ಎಂದರು. ಸಂಘದ ಸದಸ್ಯರಾದ ಪದ್ಮರೇಖಾ, ಗಂಗಾ, ಶಶಿಕಲಾ, ಮೀನಾಕ್ಷಿ, ಪುಷ್ಪಲತಾ, ಯೋಶೋದಾ, ರೇಖಾ, ಶಾರದಾ, ಮಂಜುಳಾ, ವಸಂತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net