

ಬೆಳಗಾವಿ: ಮಾಸಿಕ ಗೌರವಧನ 10 ಸಾವಿರ ರೂ.ಗೆ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂದ ಪ್ರತಿಭಟನೆ ಬುಧವಾರವೂ ನಡೆಯಿತು.
ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿ ಮಾಸಿಕ 10 ಸಾವಿರ ರೂ. ಗೌರವಧನ ನೀಡುವ ಆದೇಶ ಜಾರಿಗೊಳಿಸಬೇಕು. ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಪ್ರೋತ್ಸಾಹ ಧನ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಎಐಯುಟಿಯುಸಿ ಅಧ್ಯಕ್ಷ ಲಕ್ಷ$್ಮಣ ಜಡಗನ್ನವರ, ಉಪಾಧ್ಯೆ ರೂಪಾ ಅಂಗಡಿ, ಗೀತಾ ರಾಯವಗೋಳ, ಜಯಶ್ರೀ ನಾವಿ, ರತ್ವವ್ವ ಭಾಗೋಜಿ ಸೇರಿದಂತೆ ಅನೇಕ ಕಾರ್ಯಕರ್ತೆಯರಿದ್ದರು.