ಆಶಯ್ ಮಧು ಮಾದೇಗೌಡ ಹುಟ್ಟುಹಬ್ಬ ಆಚರಣೆ

22KMD-1
ಭಾರತೀ ವಿದ್ಯಾಸಂಸ್ಥೆಯ ಸಿಇಒ ಆಶಯ್ ಮಧು ಮಾದೇಗೌಡ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಮಾಜಿ ಸದಸ್ಯ ಬಿ.ರಾಮಕೃಷ್ಣ ಕೇಕ್ ತಿನ್ನಿಸಿದರು.
Published on

ಕೆ.ಎಂ.ದೊಡ್ಡಿ: ಇಲ್ಲಿನ ಭಾರತೀ ಎಜುಕೇಷನ್ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಮಾದೇಗೌಡ ಹುಟ್ಟುಹಬ್ಬವನ್ನು ಟ್ರಸ್ಟ್‌ನ ಅಂಗ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರು, ಮಾಜಿ ಸಂಸದ ಜಿ.ಮಾದೇಗೌಡ, ಮಧು ಜಿ.ಮಾದೇಗೌಡ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಚರಿಸಿದರು.

ಭಾರತೀ ಕಾಲೇಜಿನ ಕ್ರೀಡಾಂಗಣದಲ್ಲಿ ಆಶಯ್ ಮಧು ಮಾದೇಗೌಡ ಅವರು ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಆಚರಿಸಿಕೊಂಡರು. ಅಭಿಮಾನಿಗಳು, ಮುಖಂಡರು ಬೃಹತ್ ಹಾರ ಹಾಕಿ ಅಭಿನಂದಿಸಿದರು. ಪುತ್ರನ ಹುಟ್ಟುಹಬ್ಬದ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಆಶೀರ್ವದಿಸಿ ಶುಭಕೋರಿದರು. ಒಬ್ಬರಿಗೊಬ್ಬರು ಕೇಕ್ ತಿನ್ನಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ಶುಭ ಕೋರಿ ಮಾತನಾಡಿ, ಆಶಯ್ ಮಧು ಮಾದೇಗೌಡ ತುಂಬಾ ವಿನಯವಂತರಾಗಿದ್ದು, ಭವಿಷ್ಯದಲ್ಲಿ ಉತ್ತಮ ನಾಯಕನಾಗುವ ಗುಣ ಅವರಲ್ಲಿದೆ. ಅವರಿಗೆ ಭಗವಂತ ಆಯುರಾರೋಗ್ಯ ಕೊಟ್ಟು, ಹುಟ್ಟುಹಬ್ಬವನ್ನು ನೂರ್ಕಾಲ ಆಚರಿಸಿಕೊಳ್ಳುವಂತಾಗಲಿ ಎಂದರು.

ಆಶಯ್ ಮಧು ಮಾದೇಗೌಡ ಮಾತನಾಡಿ, ನನ್ನ ತಾತ ದಿವಂಗತ ಜಿ.ಮಾದೇಗೌಡ ಮತ್ತು ನನ್ನ ತಂದೆ ಮಧು ಜಿ.ಮಾದೇಗೌಡ ಅವರ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸಿದ್ದು, ಅಭಿಮಾನಿಗಳ ಪ್ರೀತಿಗೆ ಚಿರಋಣಿಯಾಗಿದ್ದೇನೆ. ಜಿ.ಮಾದೇಗೌಡ ರಾಜಕೀಯ ಹೊರತುಪಡಿಸಿ ಶಿಕ್ಷಣ ಕ್ಷೇತ್ರದಲ್ಲಿ ನವ ಮನ್ವಂತರ ಸೃಷ್ಟಿ ಮಾಡಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ದಾರಿದೀಪವಾಗಿದ್ದಾರೆ. ತಂದೆ ಮಧು ಜಿ.ಮಾದೇಗೌಡ ಅವರು ಸಹ ಶಿಕ್ಷಣ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡು ಶೈಕ್ಷಣಿಕ ಕ್ರಾಂತಿ ಮಾಡಿದ್ದು, ಅವರ ಮಾರ್ಗದರ್ಶನದಲ್ಲಿ ನಾನು ನಡೆಯಲಿದ್ದೇನೆ ಎಂದರು ತಿಳಿಸಿದರು.

ತಾಪಂ ಮಾಜಿ ಸದಸ್ಯರಾದ ಬಿ.ಗಿರೀಶ್, ಭರತೇಶ್, ಮುಖಂಡರಾದ ಆರ್.ಸಿದ್ದಪ್ಪ, ಮದ್ದೂರು ಅವಿನಾಶ್, ವಿನಯ್ ಹೊನ್ನೇಗೌಡ, ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ, ಭಾರತೀ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net