ಹೊದ್ದೂರು ಶ್ರೀ ಭಗವತಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ

11-npk-1
ಹೊದ್ದೂರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಅಂಗವಾಗಿ ಆಶ್ಲೇಷ ಬಲಿ ಜರುಗಿತು.
Published on

ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿದ್ದು, ಭಾನುವಾರ ರಾತ್ರಿ ದೇವಾಲಯದಲ್ಲಿ ಆಶ್ಲೇಷ ಬಲಿ ಜರುಗಿತು.

1.5 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದೆ. ವಾಸ್ತುಪೂಜೆ, ಕಳಸ ಪೂಜೆ, ವಾಸ್ತು ಬಲಿ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ಸೋಮವಾರ ಗಣಪತಿ ಹೋಮ, ಅನುಜ್ಞಾ ಬಲಿ ಹಾಗೂ ಅನುಜ್ಞಾ ಪ್ರಾರ್ಥನೆ ಜರುಗಿತು.
ಮಂಗಳವಾರ ಸಂಜೆ 4 ಗಂಟೆಗೆ ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ಜರುಗಲಿವೆ. ಬುಧವಾರ ಬೆಳಗ್ಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ , ಬ್ರಹ್ಮ ಕಳಸ ಪೂಜೆ ಕಾರ್ಯಕ್ರಮಗಳು ಜರುಗಲಿದ್ದು, ಗುರುವಾರ ಸಂಜೆ ದೇವರ ನೃತ್ಯಬಲಿ ಜರುಗಲಿದೆ.

ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳು ಮತ್ತು ಬಳಗ, ದೇವಾಲಯದ ಮುಖ್ಯ ಅರ್ಚಕ ಶ್ರೀಕಾಂತ್, ದೇವಸ್ಥಾನದ ತಕ್ಕ ಮುಖ್ಯಸ್ಥ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೌರಿರ ಕೆ.ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ಚೌರಿರ ಉದಯ ಸೇರಿದಂತೆ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net