ಅಷ್ಟ ಬಂಧ ಪ್ರತಿಷ್ಠಾ ಬ್ರಬ್ರಹ್ಮ ಕಲಶೋತ್ಸವ 30ರಿಂದ

21GKK3
Published on

ಗೋಕಾಕ: ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕಿಂತ ಮುಂಚೆ ಏ.30ರಿಂದ ಮೇ 8ರ ವರೆಗೆ ಜರುಗಲಿರುವ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ,

ನವಗ್ರಹ ದೇವರ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವದ ಆಮಂತ್ರಣ ಪತ್ರಿಕೆ ನಗರದ ಮನೆ&ಮನೆಗೂ ತಲುಪಿಸುವ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ನಗರದ ಮಹಾಲಕ್ಷಿ$್ಮ ದೇವಸ್ಥಾನದಲ್ಲಿ ಭಾನುವಾರ ಸಂಜೆ ಜಾತ್ರಾ ಮಹೋತ್ಸವ ಸಮಿತಿಯಿಂದ ಹೊರತಂದ ಮಹಾಲಕ್ಷ್ಮೀ ಪರಿವಾರದ ಮೂರ್ತಿ ಪ್ರತಿಷ್ಠಾಪನೆ

ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮೂರ್ತಿ ಪ್ರತಿಷ್ಠಾಪನೆ ಮತ್ತು ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದಾಗಿದ್ದು, ಈಗಾಗಲೇ ಅನೇಕ ಕಮಿಟಿಗಳನ್ನೂ ರಚಿಸಲಾಗಿದೆ. ಆಯಾ ಕಮಿಟಿಗಳ ಪ್ರಮುಖರು ತಮಗೆ ವಹಿಸಿರುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು. ಏ.30ರಿಂದ ಒಟ್ಟು 9 ದಿನಗಳ ಕಾಲ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಯಶಸ್ಸಿಗೆ ಪ್ರತಿಯೊಬ್ಬರೂ ತನು, ಮನ, ಧನದಿಂದ ಸಹಾ-ಯ ಮಾಡುವಂತೆ -ಕೇ-ಳಿ-ಕೊಂಡರು.

ಗೋಕಾಕ ನಗರವು ನವ ವಧುವಿನಂತೆ ಸಿಂಗಾರಗೊಳ್ಳಬೇಕು. ಅದಕ್ಕಾಗಿ ಜಾತ್ರಾ ಮಹೋತ್ಸವ ಕಮಿಟಿ ಹೆಚ್ಚಿನ ಜವಾ-ಬ್ದಾ-ರಿ ತೆಗೆದುಕೊಳ್ಳಬೇಕು. ಎಲ್ಲರೂ ಕೋಮು ಸಾಮರಸ್ಯದ ಸಂದೇಶ ನೀಡಬೇಕು. ಕೆ.ವಿ. ರಾವೇಂದ್ರ ಉಪಾಧ್ಯಾಯ ಜ್ಯೋತಿಷ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು. ಅಷ್ಟ ಬಂಧ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವದ ಆಮಂತ್ರಣ ಪತ್ರಿಕೆಗಳನ್ನು ಸಿದ್ದಪ್ಪ ಹುಚ್ಚರಾಮಗೊಳ ಅವರಿಗೆ ನೀಡುವ ಮೂಲಕ ಶಾಸಕ

ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು. ಜಾತ್ರಾ ಮಹೋತ್ಸವ ಸಮಿತಿ ಸದಸ್ಯರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net