ಕಾಲ್ತುಳಿತಕ್ಕೆ ಮೃತರ ಕುಟುಂಬಕ್ಕೆ 50 ಲಕ್ಷ ರೂ, ಸರ್ಕಾರಿ ನೌಕರಿ ನೀಡಿ

WhatsApp Image 2025-06-04 at 7.41.47 PM
Published on

ಕಲಬುರಗಿ : ೨೦೨೫ ರ ಐಪಿಎಲ್ ಚಾಂಪಿಯನ್ ಆರ್ ಸಿ ಬಿ ತಂಡದ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತ ಪಟ್ಟವರ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಹಾಗೂ ಒಂದು ಸರಕಾರಿ ನೌಕರಿಯನ್ನು ಪರಿಹಾರವಾಗಿ ನೀಡಲು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಕಲ್ಬುರ್ಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಮರ್ಪಕವಾಗಿ ಪೊಲೀಸ್ ಬಂದೋಬಸ್ತ್ ಹಾಗೂ ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳಿಗಾಗಿ ಸರಿಯಾದ ಸುರಕ್ಷತೆ ವ್ಯವಸ್ಥೆ ಮಾಡದೆ ಇರುವುದರಿಂದ ಸುಮಾರು ೧೦ ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದು ದುರದೃಷ್ಟಕರ ಸಂಗತಿಯಾಗಿದೆ.

ರಾಜ್ಯ ಹಿಂದೆಂದೂ ಕಂಡರಿಯದಂತಹ ದುರಂತ ಸಂಭವಿಸಿದೆ. ಇದು ಸಂಪೂರ್ಣ ರಾಜ್ಯ ಸರ್ಕಾರದ ವೈಫಲ್ಯವಾಗಿದ್ದು, ಮೃತರ ಕುಟುಂಬಕ್ಕೆ ಈ ಕೂಡಲೇ ಪರಿಹಾರ ಧನವನ್ನು ನೀಡಲು ರಾಜ್ಯ ಸರ್ಕಾರಕ್ಕೆ ಡಾ ಅಂಬಾರಾಯ ಅಷ್ಠಗಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net