ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ವಾತಾವರಣ

ashwath
Published on

ಮಡಿಕೇರಿ:

1975ರಲ್ಲಿ ದೇಶದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯಂಥ ವಾತಾವರಣ ಈಗ ಕರ್ನಾಟಕದಲ್ಲಿ ಕಂಡುಬರುತ್ತಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ ಹೇಳಿದರು. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ 'ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಯಾರೂ ಸರ್ಕಾರವನ್ನು ಟೀಕೆ ಮಾಡುವಂತಿಲ್ಲ. ಟೀಕೆ ಮಾಡಿದರೆ ಜೈಲುಪಾಲು ಮಾಡಲಾಗುತ್ತದೆ. ಕೊಡಗಿನ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ್ದಕ್ಕೆ ಬಿಜೆಪಿ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಂತಾಯಿತು. ಇದರ ಜತೆಗೆ ಓಲೈಕೆ ಮತ್ತು ತುಷ್ಠೀಕರಣ ರಾಜಕೀಯ ಕರ್ನಾಟಕದಲ್ಲಿ ಇದೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಆ ಪಕ್ಷದ ಶಾಸಕರೇ ಈಗ ಮಾತನಾಡುತ್ತಿದ್ದಾರೆ. ತುರ್ತುಪರಿಸ್ಥಿತಿ ಸಂದರ್ಭ ಬಿಹಾರ, ಗುಜರಾತ್ ರಾಜ್ಯದಲ್ಲಿ ಇದ್ದಂತೆ ಕರ್ನಾಟಕದಲ್ಲೂ ಈಗ ಭ್ರಷ್ಟಾಚಾರ ಕಂಡುಬರುತ್ತಿದೆ. ಹಾಗಾಗಿ ರಾಜ್ಯದಲ್ಲೂ ತುರ್ತು ಪರಿಸ್ಥಿತಿ ಜಾರಿಗೆ ಬರಬಹುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net