ಸಿದ್ದರಾಮಯ್ಯ ‘ಸಿದ್ರಾಮುಲ್ಲಾಖಾನ್’ ಎಂಬುದು ಜಗತ್ತಿಗೆ ಗೊತ್ತಿರುವ ವಿಚಾರ: ಡಾ.ಸಿ.ಎಸ್. ಅಶ್ವತ್ಥ ನಾರಾಯಣ

h3-Ashwanath Narayan 6
Published on

ಮೈಸೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ‘ಸಿದ್ರಾಮುಲ್ಲಾಖಾನ್’ ಎಂಬುದು ಜಗತ್ತಿಗೆ ಗೊತ್ತಿರುವ ವಿಚಾರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು ಸಿದ್ರಾಮು ಲ್ಲಾಖಾನ್ ಎಂದು ಬದಲಾಯಿಸಿಕೊಳ್ಳುವುದು ಉತ್ತಮ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಗಲಾಟೆ ಮಾಡುತ್ತಿಲ್ಲ ಕಾಂಗ್ರೆಸ್‌ನವರು ಕಾಲು ಕೆರೆದು ಜಗಳಕ್ಕೆ ಬರುತ್ತಿದ್ದಾರೆ. ನಾವು ಜಗಳಕ್ಕೆ ಅವಕಾಶ ಮಾಡಿಕೊಡುವುದಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಾ ಉತ್ತಮ ಆಡಳಿತ ನೀಡುತ್ತೇವೆ. ಕಾಂಗ್ರೆಸ್‌ನವರು ಏನನ್ನು ಬೇಕಾದರೂ ಹೇಳಬಹುದು. ದಾಖಲೆ ಇಲ್ಲದೆ ಬಾಯಿಗೆ ಬಂದಾಗ ಮಾತನಾಡಬಹುದು. ಅವರಿಗೆ ಏನಾದರೂ ಕಾನೂನಿನ ಬಗ್ಗೆ ಗೌರವ ಇದೆಯಾ? ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದ್ದು, ಕಾಂಗ್ರೆಸ್ ಸಂಪೂರ್ಣ ತಿರಸ್ಕೃತಗೊಂಡ ಪಕ್ಷವಾಗಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ರೌಡಿಶೀಟರ್‌ಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ವಿಚಾರದ ಕುರಿತು ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಈ ಕುರಿತು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ, ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net