

ಶಿರ್ವ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅಶ್ವಿನ್ ಶೆಟ್ಟಿ ಅವರು ಮಂಡಿಸಿದ ಎಫೆಕ್ಟ್ ಆಫ್ ಟ್ರೀಸ್ ಎಲಿಮೆಂಟ್ ಮೆಗ್ನೀಶಿಯಂ ಆನ್‌ದ ಮೆಕ್ಯಾನಿಕಲ್ ಆ್ಯಂಡ್ ವೇರ್ ಬಿಹೇವಿಯರ್ ಆಫ್ ಸಿಲಿಕಾನ್ ಕಾರ್ಬೈಡ್ ರೀಯಿನ್ ಪೋರ್ಸ್ಡ್ ಅಲ್ಯೂಮಿನಿಯಂ ಸಿಲಿಕಾನ್ ಯುಟಿಕ್ಟಿಕ್ ಮೆಟಲ್ ಮ್ಯಾಟ್ರಿಕ್ಸ್ ಕಾಂಪೋಸಿಟ್ ಎಂಬ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮತ್ತು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಮತ್ತು ಇಂಡಸ್ಟ್ರೀಯಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಸತ್ಯಶಂಕರ ಶರ್ಮಾ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಬೆಳಗಾವಿಯಲ್ಲಿ ಶುಕ್ರವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 25ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.