ರಾಡ್‌ಬಿದ್ದು ಎಎಸ್‌ಐಗೆ ಗಂಭೀರ ಗಾಯ

crime
Published on

ಹುಬ್ಬಳ್ಳಿ: ಇಲ್ಲಿಯ ಕ್ಲಬ್ ರಸ್ತೆಯಲ್ಲಿನ ಪ್ಲೈಓವರ್ ಮೇಲಿಂದ ಬಿದ್ದ ಕಬ್ಬಿಣದ ರಾಡ್ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಅವರನ್ನು ಗಂಭೀರ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ.
ಗಾಯಗೊಂಡಿರುವ ನಾಭಿರಾಜ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರ ದಟ್ಟಣೆ ಇದೆ. ಯಾವುದೇ ಸುರಕ್ಷತಾ ಕ್ರಮ ಅನುಸರಿಸದೇ ಇರುವುದರಿಂದ ಈ ಹಿಂದೆ ಕ್ರೇನ್ ಬಿದ್ದು ಕೆಲವರು ಗಾಯಗೊಂಡಿದ್ದರು. ಈಗ ಎಎಸ್‌ಐ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ವಾಹನ ಸಂಚಾರದ ಮೇಲೆ ನಿಗಾ ಇಡಬೇಕು. ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net