

ಗದಗ: ಆದರ್ಶ ಶಿಕ್ಷಣ ಸಮಿತಿಯ ಶ್ರೀ ದೇವದತ್ತ ಶಂಕರರಾವ್ ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಎಚ್ ಡಿ ಎಫ್ ಸಿ ಫಸ್ಟ್ ಬ್ಯಾಂಕ್ ಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಮಹಾವಿದ್ಯಾಲಯದ ವಿಶಾಲ ಮೈದಾನದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಆದರ್ಶ ಶಿಕ್ಷಣ ಸಮಿತಿಯ ಚೇರಮನ್ ರಾದ ಶ್ರೀ. ಆನಂದ್ ಎಲ್. ಪೊತ್ನೀಸ್ ರವರು ಸಸಿಯನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ
ಗಿಡ, ಮರಗಳ ನಾಶದಿಂದ ಹಾನಿ ಯಾಗುವ ಬಗ್ಗೆ ಮಕ್ಕಳಿಂದಲೆ ಪರಿಸರದ ಬಗ್ಗೆ ಜಾಗತಿ ಮೂಡಿಸುವುದು ಭವಿಷ್ಯಕ್ಕೆ ಒಳ್ಳೆಯದು. ಈ ಸಂಬಂಧ ಶಿಕ್ಷಕರು ಮರ,ಗಿಡ ಪ್ರಕತಿಗಳ ಬಗ್ಗೆ ಮಕ್ಕಳಿಗೆ ಹೆಚ್ಚು ತಿಳಿವಳಿಕೆ ಮೂಡಿಸ ಬೇಕಾದ ಅವಶ್ಯಕತೆ ಇದೆ ಅಷ್ಟೇ ಅಲ್ಲದೆ ದೇಶದ ಪ್ರತಿಯೊಬ್ಬ ಪ್ರಜೆಯು ಪರಿಸರದ ಬಗ್ಗೆ ಕಾಳಜಿ ಹೊಂದಿರಬೇಕು. ಇತ್ತೀಚೆನ ದಿನಗಳಲ್ಲಿ ಮನುಷ್ಯ ತನ್ನ ವೈಯಕ್ತಿಕ ಐಷಾರಾಮಿ ಜೀವನಕ್ಕೆ ಮಾರುಹೋಗಿ ದುರಾಸೆಯಿಂದ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾನೆ. ಅಗತ್ಯಕ್ಕಿಂತ ಹೆಚ್ಚಾಗಿ ಯಾವುದೇ ವಸ್ತುಗಳನ್ನು ಬಳಸಿದರೂ ಅದರಿಂದ ಪರಿಸರಕ್ಕೆ ಹಾನಿಯಾಗುವುದು ಖಚಿತ. ಹಿಂದಿನವರು ಯೋಚಿಸಿ ರಸ್ತೆಬದಿ ಗಳಲ್ಲಿ ಮರಗಿಡಗಳನ್ನು ನೆಟ್ಟು ರಕ್ಷಿಸಿರುವುದು ಇಂದು ನಮ್ಮ ಕಣ್ಣ ಮುಂದಿದೆ. ಅವು ಹೆಮ್ಮರವಾಗಿ ಮನುಷ್ಯನಿಗೆ ಉಪಯೋಗ ವಾಗಿವೆ. ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಒಂದೊಂದು ಗಿಡನೆಟ್ಟು ಬೆಳೆಸುವ ಮೂಲಕ ಪ್ರಕತಿಗೆ ತಮ್ಮ ಅಳಿಲುಸೇವೆ ಸಲ್ಲಿಸಬೇಕು ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ. ಆನಂದ ಡಿ. ಗೋಡಖಿಂಡಿ, ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯರಾದ ಶ್ರೀ. ಆರ್.ಆರ್. ಕುಲಕರ್ಣಿ, ಬ್ಯಾಂಕ್ ಆಪರೇಷನ್ ಮ್ಯಾನೇಜರ್ ಶ್ರೀ. ಪ್ರವೀಣ್ ಬೆಳವನಕರ್, ಬ್ಯಾಂಕ್ ಮ್ಯಾನೇಜರ್ ಶ್ರೀ. ಮಾರುತಿ ಮುಂಡರಗಿ, ಶ್ರೀ. ಆದಿತ್ಯ ಜೋಶಿ, ಶ್ರೀ. ಬಸವರಾಜ ಟಿ.ಪಿ., ಶ್ರೀಮತಿ ಅಕ್ಷತಾ ಏಳೂರ, ಕು. ನೇತ್ರಾ ಡಿ, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಎಚ್ ಡಿ ಎಫ್ ಸಿ ಫಸ್ಟ್ ಬ್ಯಾಂಕ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.