ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ಪ್ರತಿಯೊಬ್ಬರಿಗೂ ಅಗತ್ಯ: ಆನಂದ್​ ಪೋತ್ನಿಸ್​

03GDG05
Published on

ವಿಜಯವಾಣಿ ಸುದ್ದಿಜಾಲ ಗದಗ
ನಗರದ ಆದರ್ಶ ಶಿಕ್ಷಣ ಸಮಿತಿಯ ವಿಶ್ವನಾಥ್​ ರಾಮಚಂದ್ರಪ್ಪ ಕುಷ್ಟಗಿ ಮೆಮೋರಿಯಲ್​ ವಾಣಿಜ್ಯ ಕಾಲೇಜ್​ನಲ್ಲಿ ಶುಕ್ರವಾರ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಚೇರ್ಮನ್​ ಆನಂದ ಪೋತ್ನಿಸ್​ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾಥಿರ್ ವಿದ್ಯಾಥಿರ್ನಿಯರಿಗೆ ಪ್ರಥಮ ಚಿಕಿತ್ಸೆ ತರಬೇತಿ ಪಡೆಯುವುದು ಬಹಳಷ್ಟು ಅವಶ್ಯಕತೆ ಇದೆ. ಪ್ರಥಮ ಚಿಕಿತ್ಸೆಯಿಂದ ಪ್ರಾಣವನ್ನು ಉಳಿಸಿದ ನಿದರ್ಶನಗಳಿವೆ ಎಂದು ಹೇಳಿದರು.
ಜಿಲ್ಲಾ ಭಾರತೀಯ ರೆಡ್​ ಕ್ರಾಸ್​ ಸಂಸ್ಥೆಯ ಗೌರವ ಕಾರ್ಯದಶಿರ್ ಡಾ. ಎಂ.ಡಿ ಸಮುದ್ರಿ ಉಪನ್ಯಾಸ ನೀಡಿ, ಪ್ರಥಮ ಚಿಕಿತ್ಸೆ ಎಂದರೆ, ಗಾಯ ಅಥವಾ ಅವಘಡಗಳಾದಾಗ ಒದಗಿಸುವ ಆರಂಭಿಕ ಆರೈಕೆ ಎಂಬುದಾಗಿ ವ್ಯಾಖ್ಯಾನಿಸಬಹುದು. ಸಾಮಾನ್ಯವಾಗಿ, ಈ ಆರೈಕೆಯನ್ನು ತಜ್ಞರಲ್ಲದ, ಆದರೆ ತರಬೇತಿ ಪಡೆದ ವೃತ್ತಿಪರ ವ್ಯಕ್ತಿಗಳು ರೋಗಿಗೆ ಅಥವಾ ಗಾಯಾಳುಗಳಿಗೆ, ಸರಿಯಾದ ವೈದ್ಯಕಿಯ ಚಿಕಿತ್ಸೆ ದೊರೆಯುವವರೆಗೆ ಒದಗಿಸುತ್ತಾರೆ. ಪ್ರಥಮ ಚಿಕಿತ್ಸೆ ಎಂಬುದು ಕೆಲವು ಸಂದರ್ಭಗಳಲ್ಲಿ ಸರಳ ಚಿಕಿತ್ಸೆಗಳ ಸರಣಿಯಾಗಿದ್ದರೆ, ಇನ್ನು ಕೆಲವು ಸಂದರ್ಭಗಳಲ್ಲಿ ಮಹತ್ವದ ಜೀವರಕ್ಷಕ ತಂತ್ರವಾಗಿರುತ್ತದೆ ಎಂದರು.
ಸಂಸ್ಥೆಯ ಆಡಳಿತ ಅಧಿಕಾರಿ ಪಿ. ಆರ್​. ಇನಾಮ್ದಾರ್​, ಪ್ರಾಚಾರ್ಯ ಪ್ರೊ. ಕೆ. ಗಿರಿ ರಾಜಕುಮಾರ್​, ಪ್ರೊ. ರವಿ ಕುಲಕಣಿರ್, ಪ್ರೊ. ಬಿ. ಪಿ. ಜೈನರ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net