ವಾಣಿಜ್ಯ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದಿಂದ 'ನನ್ನ ಮೊದಲ ಮತ ದೇಶಕ್ಕಾಗಿ' ಅಭಿಯಾನ.

08GDG03
Published on

ಐ ಕ್ಯೂ ಎ ಸಿ ಅಡಿಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ " ಮೇರಾ ಪೆಹ್ಲಾ ವೋಟ್ ದೇಶ ಕೆ ಲಿಯೇ "  ಶೀರ್ಷಿಕೆ ಅಡಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ ಜೈನರವರು ಮಾತನಾಡಿ  ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ ಅಭಿಯಾನವನ್ನು ಪ್ರಾರಂಭಿಸಿದೆ, ಇದು ಚುನಾವಣೆಗಳಲ್ಲಿ ಮೊದಲ ಬಾರಿಗೆ ಮತದಾನ ಮಾಡು ಯುವಕರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ (ನನ್ನ ಮೊದಲ ಮತ ದೇಶಕ್ಕಾಗಿ) ‘ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೇ’ ಎಂಬ ಶೀರ್ಷಿಕೆಯಡಿ ಮೊದಲ ಬಾರಿ ಮತ ಚಲಾಯಿಸುವ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಯುವ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸುವಂತೆ ಉತ್ತೇಜಿಸಲು ಈ ಅಭಿಯಾನ ಕೈಗೊಳ್ಳಲಾಗುತ್ತದೆ.

ದೇಶಕ್ಕಾಗಿ ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಈ ಒಂದು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಅಷ್ಟೇ ಅಲ್ಲದೆ 18 ವರ್ಷ ಮೇಲ್ಪಟ್ಟವರು ಮೊದಲ ಬಾರಿ ಮತದಾನ ಮಾಡುವವರು ತಮಗೆ ಅಭಿವೃದ್ಧಿಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ಮತದಾನ ಮಾಡಿ ರಾಷ್ಟ್ರದ ಭವಿಷ್ಯವನ್ನು ರೂಪಿಸಲು ನಿಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿ ದೇಶದ ಉನ್ನತಿಗಾಗಿ ನನ್ನ ಮೊದಲ ಮತ ಎಂಬುದನ್ನು ಅರಿತುಕೊಂಡು ಮತದಾನ ಮಾಡಿ  ಅಷ್ಟೇ ಅಲ್ಲದೆ ತಮ್ಮ ಮನೆಗೆ ಸದಸ್ಯರಿಗೂ ಅಕ್ಕ-ಪಕ್ಕದ ಮನೆಯವರಿಗೂ ಸ್ನೇಹಿತರಿಗೂ ಕಡ್ಡಾಯವಾಗಿ ಮತದಾನ ಮಾಡುವ ಹಾಗೆ ತಿಳುವಳಿಕೆ ನೀಡಿ ಕಾರಣ ಇದು ನಮ್ಮ ಜವಾಬ್ದಾರಾಗಿದೆ ಎಂದು ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಕೆ ಗಿರಿರಾಜ ಕುಮಾರ್ ರವರು ಮಾತನಾಡಿ  ಭಾರತದ ಪ್ರಜೆಗಳಾದ ನಾವು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಅದರಲ್ಲೂ 18 ವರ್ಷ ಮೇಲ್ಪಟ್ಟ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವಕ ಯುವತಿಯರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ದೇಶದ ಅಭಿವೃದ್ಧಿಗೆ ಉತ್ತಮ ನಾಯಕನಿಗೆ ತಮ್ಮ ಅಮೂಲ್ಯವಾದ ಮತವನ್ನು ಹಾಕಿ ದೇಶದ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕೆಂದು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾವಿಧಿಯನ್ನ ಬೋಧಿಸಿದರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ವಿಭಾಗದ ಕಾರ್ಯದರ್ಶಿ ಮನೋಜ್ ದಲಬಂಜನ್ ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಸ್ವಯಂಸೇವಕ ಸೇವಕಿಯರು ನನ್ನ ಮೊದಲ ಮತ ದೇಶಕ್ಕಾಗಿ ಅಭಿಯಾನ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net