ಮನೆ ಮುಂದೆಯೇ ದುಷ್ಕರ್ಮಿಗಳಿಂದ ಹಲ್ಲೆ; ಕ್ಯಾಮ್ ಪ್ರಧಾನ ಕಾರ್ಯದರ್ಶಿ ಮೇಲೆ ದಾಳಿ..

Cam F
Published on

ಬೆಂಗಳೂರು: ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿ ಒಕ್ಕೂಟ (ಕ್ಯಾಮ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಗುರುವಾರ ಕೆಲಸದ ನಿಮಿತ್ತ ಹೊರಹೋಗಿದ್ದ ಶಶಿಕುಮಾರ್, ತಮ್ಮ ಕಾರು ಚಾಲಕನೊಂದಿಗೆ ರಾತ್ರಿ 9.30ಕ್ಕೆ ಜಾಲಹಳ್ಳಿಯ ಮನೆಯ ಬಳಿಗೆ ಬಂದಿದ್ದರು. ಡೋರ್ ತೆಗೆದು ಇಳಿಯುವ ಸಮಯದಲ್ಲಿ ಅಲ್ಲಿಯೇ ಹೊಂಚು ಹಾಕಿ ನಡೆದಾಡುತ್ತಿದ್ದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದರು. ತಕ್ಷಣ ಶಶಿಕುಮಾರ್, ಒಳಗೆ ಕುಳಿತು ತನ್ನ ಬಳಿಯಿದ್ದ ಡಿಫೆನ್ಸ್ ವೆಪನ್ ತೆಗೆದಾಗ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ದಾಳಿ ವೇಳೆ ತೊಡೆ ಮತ್ತು ಕೈಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದರು. ಈ ಎಲ್ಲ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಗಾಯಾಳು ಶಶಿಕುಮಾರ್ ನೀಡಿದ ದೂರಿನ ಮೇರೆಗೆ ಜಾಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net