

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಗರದ ಹೊಸ ಬಸ್ ನಿಲ್ದಾಣ ಬಳಿ ನಡೆದಿದ್ದು, ಓರ್ವನ ಮೇಲೆ ಹಲ್ಲೆಯಾಗಿದೆ.
ಸೋಮಶೇಖರ್ ಎಂಬುವವರಿಗೆ ಗಾಯವಾಗಿದ್ದು, ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ರೋಹಿರ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಗೋಕುಲ್ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.