ಕಬ್ಬಿಣದ ರಾಡ್‌ನಿಂದ ಹಲ್ಲೆ

crime
Published on

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಐವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಪನಕೊಪ್ಪದ ರಾಹುಲ್ ಎಂಬಾತನಿಗೆ ಕಬ್ಬಿಣದ ರಾಡ್ ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ರಾಜು, ಅರವಿಂದ, ವಿನಾಯಕ, ಜಗದೀಶ, ಪರಶು ಎಂಬುವರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net